Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:19 - ಕನ್ನಡ ಸತ್ಯವೇದವು J.V. (BSI)

19 ಆತನು - ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19-20 ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕ್ಕೆ ಅಲೆಯುತ್ತಿರಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:19
5 ತಿಳಿವುಗಳ ಹೋಲಿಕೆ  

ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಮಂದಿ ಎಂದು ಇಷ್ಟಪಟ್ಟು ಆದುಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಸ್ವಲ್ಪಮಂದಿಯಷ್ಟೆ.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು