Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:26 - ಕನ್ನಡ ಸತ್ಯವೇದವು J.V. (BSI)

26 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಸರ್ವೇಶ್ವರನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:26
14 ತಿಳಿವುಗಳ ಹೋಲಿಕೆ  

ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿಕೊಂಡು ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದರಿಸುತ್ತಾನಲ್ಲಾ; ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸಂತೋಷಗಳೂ ಇರುತ್ತವೆ.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲೋಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು