Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:32 - ಕನ್ನಡ ಸತ್ಯವೇದವು J.V. (BSI)

32 ಭೂನಿವಾಸಿಗಳಿಗೆ ನ್ಯಾಯತೀರಿಸುವದಕ್ಕೆ ಬರುವ ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:32
8 ತಿಳಿವುಗಳ ಹೋಲಿಕೆ  

ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಜಲರಾಶಿಗಳ ಘೋಷಕ್ಕಿಂತಲೂ ಮಹಾತರಂಗಗಳ ಗರ್ಜನೆಗಿಂತಲೂ ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.


ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.


ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು