Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:34 - ಕನ್ನಡ ಸತ್ಯವೇದವು J.V. (BSI)

34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:34
13 ತಿಳಿವುಗಳ ಹೋಲಿಕೆ  

ಯಾಹುವಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.


ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವು.


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.


ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.


ಅವರ ಬಳಿಯಲ್ಲಿ ಯೆಹೋವನನ್ನು ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವದಕ್ಕೆ ಹೇಮಾನ್ ಯೆದುತೂನರೂ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಬೇರೆ ಜನರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು