37 ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.