1 ಪೂರ್ವಕಾಲ ವೃತ್ತಾಂತ 17:10 - ಕನ್ನಡ ಸತ್ಯವೇದವು J.V. (BSI)10 ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನಿನ್ನ ಶತ್ರುಗಳೆಲ್ಲರನ್ನೂ ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾಗದಂತೆ ಇನ್ನು ಗುರಿಯಾಗರು. ನಿನ್ನ ಶತ್ರುಗಳನ್ನೆಲ್ಲ ನಿನಗೆ ಅಧೀನಮಾಡುವೆನು. ಅದು ಮಾತ್ರವಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರನ್ನು ಸಂರಕ್ಷಿಸಲು ನಾನು ನಾಯಕರನ್ನು ಎಬ್ಬಿಸುವೆನು; ನಾನು ನಿನ್ನ ವೈರಿಗಳನ್ನೆಲ್ಲಾ ಸೋಲಿಸಿಬಿಡುವೆನು. “‘ನಿನ್ನ ಮನೆತನವನ್ನು ನಾನು ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |