Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:2 - ಕನ್ನಡ ಸತ್ಯವೇದವು J.V. (BSI)

2 ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:2
13 ತಿಳಿವುಗಳ ಹೋಲಿಕೆ  

ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.


ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು