Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:24 - ಕನ್ನಡ ಸತ್ಯವೇದವು J.V. (BSI)

24 [ಜನರು -] ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್‍ದೇವರೂ ಇಸ್ರಾಯೇಲ್ಯರ ಶರಣನೂ ಆಗಿದ್ದಾನೆ, ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ ಎಂದು ನಿನ್ನ ನಾಮವನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ವಾಗ್ದಾನವನ್ನು ನೆರವೇರಿಸು. ಆಗ ಜನರು, ‘ಸರ್ವಶಕ್ತನಾದ ಯೆಹೋವನು ಇಸ್ರೇಲರ ದೇವರೂ ರಕ್ಷಕನೂ ಆಗಿದ್ದಾನೆ’ ಎಂದು ಹೇಳುವರು. ನಾನು ನಿನ್ನ ಸೇವಕನಾಗಿದ್ದೇನೆ. ನನ್ನ ಕುಟುಂಬವು ಬಲಿಷ್ಠವಾಗಿದ್ದು ನಿನ್ನ ಸೇವೆಯನ್ನು ಮುಂದುವರಿಸುವಂತೆ ಕೃಪೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:24
17 ತಿಳಿವುಗಳ ಹೋಲಿಕೆ  

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಮ್ಮ ಯೆಹೋವದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲಪಡಿಸು.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಕೇಳಿ ಅವರು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ಈ ಆಲಯವನ್ನು ನಿನ್ನ ಹೆಸರಿನದಾಗಿ ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತ ಪಡಿಸಿ ನೆರವೇರಿಸು; ಅದು ಸದಾ ಸ್ಥಿರವಾಗಿರಲಿ.


ನನ್ನ ದೇವರೇ, ನೀನು ನಿನ್ನ ಸೇವಕನಿಗೆ - ನಾನು ನಿನಗೊಂದು ಮನೆಕಟ್ಟುವೆನು ಎಂದು ವಾಗ್ದಾನಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವದಕ್ಕೆ ಧೈರ್ಯಗೊಂಡನು.


ಯೆರೆಮೀಯನು ಚಿದ್ಕೀಯನಿಗೆ - ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಕ್ಕರೆ ನಿನ್ನ ಪ್ರಾಣವುಳಿಯುವದು, ಈ ಪಟ್ಟಣವೂ ಬೆಂಕಿಯಿಂದ ಸುಡದು, ನೀನೂ ನಿನ್ನ ಮನೆತನದವರೂ ಬದುಕುವಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು