1 ಪೂರ್ವಕಾಲ ವೃತ್ತಾಂತ 17:25 - ಕನ್ನಡ ಸತ್ಯವೇದವು J.V. (BSI)25 ನನ್ನ ದೇವರೇ, ನೀನು ನಿನ್ನ ಸೇವಕನಿಗೆ - ನಾನು ನಿನಗೊಂದು ಮನೆಕಟ್ಟುವೆನು ಎಂದು ವಾಗ್ದಾನಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವದಕ್ಕೆ ಧೈರ್ಯಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನನ್ನ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನನ್ನ ದೇವರೇ, ನಿನ್ನ ಸೇವಕನಾದ ನನ್ನೊಂದಿಗೆ ನೀನು ಮಾತನಾಡಿದೆ. ನೀನು ನನ್ನ ಕುಟುಂಬವನ್ನು ಸ್ಥಿರವಾಗಿ ಕಟ್ಟುವೆನೆಂದು ವಾಗ್ದಾನ ಮಾಡಿದೆ. ಆದ್ದರಿಂದ ನಾನು ಧೈರ್ಯದಿಂದ ನಿನ್ನ ಸಂಗಡ ಮಾತನಾಡುತ್ತಿದ್ದೇನೆ; ನಿನ್ನ ವಾಗ್ದಾನವನ್ನು ನೆರವೇರಿಸು ಎಂದು ಕೇಳಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು. ಅಧ್ಯಾಯವನ್ನು ನೋಡಿ |