Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:7 - ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೇಳಿದೆನೆಂದು ಹೀಗೆ ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನನ್ನ ಸೇವಕನಾದ ದಾವೀದನಿಗೆ ಹೇಳು: ಸರ್ವಶಕ್ತನಾದ ದೇವರು ಹೀಗೆನ್ನುತ್ತಾನೆ: ‘ಕುರಿಗಳನ್ನು ಮೇಯಿಸುತ್ತಿದ್ದ ನಿನ್ನನ್ನು ನಾನು ಆರಿಸಿಕೊಂಡೆನು; ನನ್ನ ಜನರಾದ ಇಸ್ರೇಲರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:7
13 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು.


ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವದಕ್ಕೋಸ್ಕರ ಬೇತ್ಲೆಹೇವಿುಗೆ ಹೋದನು.


ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ನ್ಯಾಯಸ್ಥಾಪಕನನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು