Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:8 - ಕನ್ನಡ ಸತ್ಯವೇದವು J.V. (BSI)

8 ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಹೋದಲ್ಲೆಲ್ಲಾ ನಿನ್ನೊಂದಿಗೆ ನಾನಿದ್ದೆನು; ನಿನ್ನ ಮುಂದೆ ಹೋಗಿ ನಿನ್ನ ವೈರಿಗಳನ್ನು ಸಾಯಿಸಿದೆನು. ಈಗ ನಾನು ನಿನ್ನನ್ನು ಲೋಕದಲ್ಲಿ ಎಲ್ಲರಿಗಿಂತಲೂ ಪ್ರಸಿದ್ಧಿ ಹೊಂದುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:8
24 ತಿಳಿವುಗಳ ಹೋಲಿಕೆ  

ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು.


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಆಕೆಯು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು ಸೌಲನು ತಿಳಿದು


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಪ್ರಭುಗಳನ್ನು ಸಿಂಹಾಸನಗಳಿಂದ ದೊಬ್ಬಿ ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿದಿ. ದೇವರೇ, ಯೆಹೋವನೇ, ನೀನು ನನ್ನನ್ನು ಕುಲೀನನನ್ನೋ ಎಂಬಂತೆ ಕಟಾಕ್ಷಿಸಿದ್ದೀ.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡುಹೋದನು.


ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು; ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು