Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:9 - ಕನ್ನಡ ಸತ್ಯವೇದವು J.V. (BSI)

9 ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು; ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:9
21 ತಿಳಿವುಗಳ ಹೋಲಿಕೆ  

ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ;


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.


ಯೆಹೋವನ ಆಲಯದಲ್ಲಿ [ಸಸಿಗಳಂತೆ] ನೆಡಲ್ಪಟ್ಟವರು ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನಿನ್ನ ಶತ್ರುಗಳೆಲ್ಲರನ್ನೂ ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು