Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:1 - ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್‍ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:1
8 ತಿಳಿವುಗಳ ಹೋಲಿಕೆ  

ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.


ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿ ಆಮೇಲೆ ಅವನನ್ನು ಹುಡುಕಲೇ ಇಲ್ಲ.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ - ಇಸ್ರಾಯೇಲ್‍ದೇವರ ಮಂಜೂಷವನ್ನು ಏನು ಮಾಡೋಣ ಎಂದು ಕೇಳಲು ಅವರು - ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಅವರು ಹಾಗೆಯೇ ಇಸ್ರಾಯೇಲ್‍ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸುಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ; ಅದು ನಿತ್ಯವೂ ಸೌಭಾಗ್ಯದಿಂದಿರುವದು ಎಂದು ಪ್ರಾರ್ಥಿಸಿದನು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು; ಅವರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಾಯೇಲ್ಯರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲ್ಯರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲ್ಯರಿಗೂ ಅಮೋರಿಯರಿಗೂ ಸಮಾಧಾನವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು