1 ಪೂರ್ವಕಾಲ ವೃತ್ತಾಂತ 18:10 - ಕನ್ನಡ ಸತ್ಯವೇದವು J.V. (BSI)10 (ತೋವಿಗೂ ಹದರೆಜರನಿಗೂ ವಿರೋಧವಿತ್ತು.) ದಾವೀದನು ಹದರೆಜರನ ಮೇಲೆ ಬಿದ್ದು ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 (ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು. ಅಧ್ಯಾಯವನ್ನು ನೋಡಿ |