Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:11 - ಕನ್ನಡ ಸತ್ಯವೇದವು J.V. (BSI)

11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:11
20 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಮುಡುಪಾಗಿಟ್ಟ ಬೆಳ್ಳಿ ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ ಕಬ್ಬಿಣ ಇವುಗಳನ್ನೂ ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನು ತೆಗೆದುಕೊಂಡನು. ಅವನ ಜನರು - ಇವು ದಾವೀದನ ಕೊಳ್ಳೆ ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡಕೊಂಡು ಬಂದರು.


ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.


ನೀವು ನಿಮ್ಮನಿಮ್ಮೊಳಗೆ ಯೆಹೋವನಿಗೆ ಕಾಣಿಕೆಯನ್ನು ಎತ್ತಿ ಕೊಡಬೇಕು; ಮನಃಪೂರ್ವಕವಾಗಿ ಕಾಣಿಕೆಯನ್ನು ಕೊಡುವವರೇ ತರಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕಂದರೆ - ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳೂ


(ತೋವಿಗೂ ಹದರೆಜರನಿಗೂ ವಿರೋಧವಿತ್ತು.) ದಾವೀದನು ಹದರೆಜರನ ಮೇಲೆ ಬಿದ್ದು ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದನು.


ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು