1 ಪೂರ್ವಕಾಲ ವೃತ್ತಾಂತ 18:8 - ಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಹದರೆಜರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನೂ ಕಂಬಗಳನ್ನೂ ಬೇರೆ ಸಾಮಾನುಗಳನ್ನೂ ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು. ಅಧ್ಯಾಯವನ್ನು ನೋಡಿ |