Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:13 - ಕನ್ನಡ ಸತ್ಯವೇದವು J.V. (BSI)

13 ಧೈರ್ಯದಿಂದಿರು; ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:13
18 ತಿಳಿವುಗಳ ಹೋಲಿಕೆ  

ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರ್ರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ.


ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು.


ದಾವೀದನು ಸೌಲನಿಗೆ - ಆ ಫಿಲಿಷ್ಟಿಯನ ನಿವಿುತ್ತವಾಗಿ ಯಾವನೂ ಎದೆಗೆಡಬಾರದು; ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು ಅನ್ನಲು ಸೌಲನು ಅವನಿಗೆ -


ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು.


ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.


ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ, ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.


ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.


ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.


ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.


ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರೋಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು