Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:19 - ಕನ್ನಡ ಸತ್ಯವೇದವು J.V. (BSI)

19 ಸೇನಾಪತಿಯಾದ ಶೋಫಕನನ್ನು ಕೊಂದನು. ಹದರೆಜರನ ದಾಸರು ಇಸ್ರಾಯೇಲ್ಯರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವದಕ್ಕೆ ಮನಸಿಲ್ಲದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹದರೆಜೆರನಿಗೆ ದಾಸರಾಗಿ ಇದ್ದವರು ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು, ದಾವೀದನೊಡನೆ ಸಂಧಾನ ಮಾಡಿಕೊಂಡು ಅವನಿಗೆ ಅಧೀನರಾದರು.ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯಮಾಡಲು ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹದದೆಜರನು ತಾನು ದಾವೀದನ ಸೈನ್ಯದಿಂದ ಸೋಲಿಸಲ್ಪಟ್ಟನೆಂದು ಗೊತ್ತಾದಾಗ ದಾವೀದನೊಂದಿಗೆ ಸಂಧಾನ ಮಾಡಿ ಅವನ ಸೇವಕನಾದನು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವುದನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹದದೆಜೆರನ ಅಧೀನ ರಾಜರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ದಾವೀದನ ಸಂಗಡ ಸಂಧಾನ ಮಾಡಿಕೊಂಡು, ಅವನಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:19
13 ತಿಳಿವುಗಳ ಹೋಲಿಕೆ  

ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು.


ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಒಪ್ಪಂದಮಾಡಿಕೊಂಡು ಅವರ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವದಕ್ಕೆ ಧೈರ್ಯಗೊಳ್ಳಲಿಲ್ಲ.


ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳು ಸಾವಿರ ರಥಗಳನ್ನು ಹಾಳು ಮಾಡಿ ನಾಲ್ವತ್ತು ಸಾವಿರ ಮಂದಿ ಕಾಲಾಳುಗಳನ್ನು ಕೊಂದುಬಿಟ್ಟನು.


ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ನಡಿಸಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಹೋಗಿ ಅದಕ್ಕೆ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಹಾಳುಮಾಡಿಬಿಟ್ಟನು.


ಇದಾದನಂತರ ಅಮ್ಮೋನಿಯರ ಅರಸನು ಸತ್ತನು. ಅವನಿಗೆ ಬದಲಾಗಿ ಅವನ ಮಗನಾದ ಹಾನೂನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು