1 ಪೂರ್ವಕಾಲ ವೃತ್ತಾಂತ 19:6 - ಕನ್ನಡ ಸತ್ಯವೇದವು J.V. (BSI)6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ ಅರಾಮ್ ಮಾಕದಿಂದಲೂ ಚೋಬಾರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನು ತಮಗೆ ಶತ್ರುವಾದನೆಂದು ಅಮ್ಮೋನಿಯರಿಗೆ ತಿಳಿದಾಗ ಹಾನೂನನು ಮೂವತ್ನಾಲ್ಕು ಸಾವಿರ ಕಿಲೋಗ್ರಾಂ ತೂಕದ ಬೆಳ್ಳಿಯನ್ನು ಕೊಟ್ಟು ಮೆಸೊಪೊಟೆಮಿಯಾದಿಂದ ರಥಗಳನ್ನೂ ರಾಹುತರನ್ನೂ ಕೊಂಡುಕೊಂಡನು. ಅಲ್ಲದೆ ಅರಾಮದ ಮಾಕ ಮತ್ತು ಚೋಬಾ ಪಟ್ಟಣಗಳಿಂದ ರಥಗಳನ್ನು ಮತ್ತು ರಾಹುತರನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿ |