Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:7 - ಕನ್ನಡ ಸತ್ಯವೇದವು J.V. (BSI)

7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧಸನ್ನದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:7
12 ತಿಳಿವುಗಳ ಹೋಲಿಕೆ  

ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,


ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿನವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು ಎಂಬದೇ.


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ, ಆ ತಗ್ಗಿನ ಮಧ್ಯದಲ್ಲಿದ್ದ ಪಟ್ಟಣ ಇವುಗಳೂ


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಅವನ ಸಾವಿರ ರಥಗಳನ್ನೂ ಏಳುಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.


ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ ರಥಗಳೂ ಅವನ ರಾಹುತರೂ ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲ್ಯರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.


ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು