Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:23 - ಕನ್ನಡ ಸತ್ಯವೇದವು J.V. (BSI)

23 ಗೆಷೂರ್ಯರೂ ಅರಾಮ್ಯರೂ ಯಾಯೀರನ ಸಂತಾನದವರಿಂದ ಯಾಯೀರನ ಗ್ರಾಮಗಳನ್ನೂ ಕೆನತ್ ಪ್ರಾಂತದ ಗ್ರಾಮಗಳನ್ನೂ ಒಟ್ಟು ಅರುವತ್ತು ಸ್ಥಾನಗಳನ್ನು ಕಿತ್ತುಕೊಂಡರು. ಈ ಸ್ಥಾನಗಳವರೆಲ್ಲರೂ ಗಿಲ್ಯಾದ್ಯರ ಮೂಲ ಪುರುಷನಾದ ಮಾಕೀರನ ಗೋತ್ರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:23
9 ತಿಳಿವುಗಳ ಹೋಲಿಕೆ  

ತಲ್ಮೈಯ ಬಳಿಯಲ್ಲಿ ಮೂರು ವರುಷ ಇದ್ದನು.


ಯಾಯೀರನ ಗ್ರಾಮಗಳೆನಿಸಿಕೊಳ್ಳುವ ಅರುವತ್ತು ಊರುಗಳು ಇದರಲ್ಲೇ ಇರುತ್ತವೆ.


ಇಸ್ರಾಯೇಲ್ಯರು ಗೆಷೂರ್ಯರನ್ನೂ ಮಾಕತೀಯರನ್ನೂ ದೇಶದೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿಯೇ ಇರುತ್ತಾರೆ.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.)


ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ನೋಡಿದನು; ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಯೋಸೇಫನು ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.


ಸೆಗೂಬನು ಯಾಯೀರನನ್ನು ಪಡೆದನು. ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು.


ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲ ಪುರುಷನು.


ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು