Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:55 - ಕನ್ನಡ ಸತ್ಯವೇದವು J.V. (BSI)

55 ಯಾಬೇಚಿನಲ್ಲಿ ವಾಸಿಸುವ ಕುಲಕರಣಿ ಕುಟುಂಬದವರಾದ ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲಪುರುಷನಾಗಿರುವ ಹಮತನಿಂದ ಉತ್ಪನ್ನರಾದ ಕೇನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಶಾಸ್ತ್ರಿಗಳ ಸಂತಾನ: ಯಾಬೇಚ್, ತಿರ್ರಾತ್ಯ, ಶಿಮ್ಗಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್‌ರೇಕಾಬನ್ನು ಹಮಾತನು ಸ್ಥಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:55
11 ತಿಳಿವುಗಳ ಹೋಲಿಕೆ  

ಅವನು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ - ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸೂ ಯಥಾರ್ಥವಾಗಿರುತ್ತದೋ ಎಂದು ಕೇಳಿದನು. ಅವನು - ಹೌದು ಎಂದು ಉತ್ತರಕೊಟ್ಟನು. ಆಗ ಯೇಹುವು - ಹಾಗಾದರೆ ನಿನ್ನ ಕೈಕೊಡು ಅನ್ನಲು ಅವನು ಕೈಕೊಟ್ಟನು.


ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.


(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)


ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಸಲ್ಮನಿಂದ ಬೇತ್ಲೆಹೇಮ್ ನೆಟೋಫಾ ಅಟರೋತ್ ಬೇತ್ಯೋವಾಬ್ ಊರುಗಳವರೂ ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧಜನರೂ ಉತ್ಪತ್ತಿಯಾದರು.


ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು - ಚೊಚ್ಚಲಮಗನು ಅಮ್ನೋನನು; ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು; ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು