1 ಪೂರ್ವಕಾಲ ವೃತ್ತಾಂತ 20:1 - ಕನ್ನಡ ಸತ್ಯವೇದವು J.V. (BSI)1 ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ನಡಿಸಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಹೋಗಿ ಅದಕ್ಕೆ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಹಾಳುಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆಹಾಕಿ ಸಂಪೂರ್ಣವಾಗಿ ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ, ಯೋವಾಬನು ಬಲವಾದ ಸೈನ್ಯವನ್ನು ಕರೆದುಕೊಂಡು ಹೋಗಿ, ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ, ರಬ್ಬ ನಗರಕ್ಕೆ ಮುತ್ತಿಗೆಹಾಕಿದನು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣದ ಮೇಲೆ ದಾಳಿಮಾಡಿ, ಅದನ್ನು ನಾಶಮಾಡಿದನು. ಅಧ್ಯಾಯವನ್ನು ನೋಡಿ |