Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:10 - ಕನ್ನಡ ಸತ್ಯವೇದವು J.V. (BSI)

10 ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನೀನು ದಾವೀದನ ಹತ್ತಿರಕ್ಕೆ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದಿಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಸರ್ವೇಶ್ವರ ಹೇಳುತ್ತಾರೆ’ ಎಂಬುದಾಗಿ ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:10
9 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.


ಆತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -


ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ - ಯೆಹೋವನು ಹೇಳುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು