1 ಪೂರ್ವಕಾಲ ವೃತ್ತಾಂತ 21:13 - ಕನ್ನಡ ಸತ್ಯವೇದವು J.V. (BSI)13 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು. ಅಧ್ಯಾಯವನ್ನು ನೋಡಿ |
ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.