1 ಪೂರ್ವಕಾಲ ವೃತ್ತಾಂತ 21:15 - ಕನ್ನಡ ಸತ್ಯವೇದವು J.V. (BSI)15 ದೇವರು ಯೆರೂಸಲೇಮನ್ನೂ ಸಂಹರಿಸುವದಕ್ಕೆ ದೂತನನ್ನು ಕಳುಹಿಸಿದನು; ಆದರೆ ಆ ದೂತನು ಸಂಹರಿಸುವದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಟ್ಟು ಸಂಹಾರಕದೂತನಿಗೆ - ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿ |