1 ಪೂರ್ವಕಾಲ ವೃತ್ತಾಂತ 21:17 - ಕನ್ನಡ ಸತ್ಯವೇದವು J.V. (BSI)17 ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |