1 ಪೂರ್ವಕಾಲ ವೃತ್ತಾಂತ 21:2 - ಕನ್ನಡ ಸತ್ಯವೇದವು J.V. (BSI)
2 ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು - ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಾಯೇಲ್ಯರನ್ನು ಲೆಕ್ಕಮಾಡಿಕೊಂಡು ಬನ್ನಿರಿ ಎಂದು ಆಜ್ಞಾಪಿಸಿದನು.
2 ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
2 ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಯೇಲರನ್ನು ಲೆಕ್ಕಮಾಡಿಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.
2 ದಾವೀದನು ಯೋವಾಬನನ್ನೂ ಇಸ್ರೇಲರ ಇತರ ಅಧಿಪತಿಗಳನ್ನೂ ಕರೆದು ಅವರಿಗೆ, “ದೇಶದೊಳಕ್ಕೆ ಹೋಗಿ ಇಸ್ರೇಲರೆಲ್ಲರನ್ನು ಲೆಕ್ಕಿಸಿರಿ. ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣ ತನಕ ಎಲ್ಲಾ ಊರುಗಳನ್ನು ಸಂಚರಿಸಿ ಜನರನ್ನು ಲೆಕ್ಕಿಸಿರಿ. ಆಗ ನನಗೆ ನನ್ನ ರಾಜ್ಯದ ಜನಸಂಖ್ಯೆಯು ತಿಳಿಯುವದು” ಅಂದನು.
2 ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.
ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ.
ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು.
ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.
ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.