Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:27 - ಕನ್ನಡ ಸತ್ಯವೇದವು J.V. (BSI)

27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:27
12 ತಿಳಿವುಗಳ ಹೋಲಿಕೆ  

ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಆಗ ಯೇಸು ಅವನಿಗೆ - ನಿನ್ನ ಕತ್ತಿಯನ್ನು ತಿರಿಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ಸಾಯುವರು.


ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಸ್ಥಳದಲ್ಲಿ, ನಿನ್ನ ಜನ್ಮಭೂವಿುಯಲ್ಲಿ ನಿನಗೆ ನ್ಯಾಯತೀರಿಸುವೆನು.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.


ಮೂರುವರುಷಗಳ ಕಾಲ ಬರವು ಉಂಟಾಗಬೇಕೋ, ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಕತ್ತಿಗೆ ಬಲಿಯಾಗುವದು ಬೇಕೋ, ಇಲ್ಲವೆ ಇಸ್ರಾಯೇಲ್ಯರ ಸಮಸ್ತಪ್ರಾಂತಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರಕದೂತನಿಂದುಂಟಾಗುವ ಮೂರು ದಿನಗಳ ಘೋರ ವ್ಯಾಧಿ ರೂಪವಾದ ಯೆಹೋವನ ಕತ್ತಿಯುಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ ಎಂಬದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಎಂದು ಹೇಳಿದನು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ


ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರವೂ ಯಜ್ಞವೇದಿಯೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು