Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:6 - ಕನ್ನಡ ಸತ್ಯವೇದವು J.V. (BSI)

6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋವಾಬನು ಲೇವಿ ಕುಲದವರನ್ನು ಮತ್ತು ಬೆನ್ಯಾಮೀನನ ಕುಲದವರನ್ನು ಜನಗಣತಿಯಲ್ಲಿ ಸೇರಿಸಲಿಲ್ಲ; ಯಾಕೆಂದರೆ ದಾವೀದನ ಆಜ್ಞೆಯು ಅವನಿಗೆ ಸರಿಕಾಣಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:6
6 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ ಇದರ ನಿವಿುತ್ತ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾದದರಿಂದ ಅದನ್ನು ಪೂರ್ತಿಗೊಳಿಸಲಿಲ್ಲ. ಈ ಖಾನೇಷುಮಾರಿಯು ದಾವೀದನ ರಾಜ್ಯ ವೃತ್ತಾಂತಗ್ರಂಥದಲ್ಲಿ ಲಿಖಿತವಾಗಲಿಲ್ಲ.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಖಾನೇಷುಮಾರಿಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು