Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:12 - ಕನ್ನಡ ಸತ್ಯವೇದವು J.V. (BSI)

12 ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ ಇಸ್ರಾಯೇಲ್ಯರನ್ನು ಆಳುವದಕ್ಕೆ ನಿನ್ನನ್ನು ನೇವಿುಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಷತೆಯಿಂದ ರಾಜ್ಯಭಾರ ಮಾಡುವದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:12
12 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.


ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು.


ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳುಕೊಳ್ಳುತ್ತೇವೆ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು ಕಲಿಸಿಕೊಡು; ರಾಜಕುಮಾರನಾದ ಅವನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ನಿನ್ನ ದೇವರಾದ ಯೆಹೋವನ ಕಟ್ಟಳೆಯನ್ನು ಕೈಕೊಂಡು ಆತನ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮ ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವದಾದರೆ ನೀನು ಯಾವದನ್ನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವಿ.


ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು