Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರಿಗೆ ಕೊಟ್ಟ ವಿಧಿ ನ್ಯಾಯಗಳನ್ನು ನೀನು ಕೈಕೊಳ್ಳುವದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು; ಅಂಜಬೇಡ, ಕಳವಳಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:13
25 ತಿಳಿವುಗಳ ಹೋಲಿಕೆ  

ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನೆಂದು ಹೇಳಿದ್ದಾನೆ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ನಿನ್ನ ದೇವರಾದ ಯೆಹೋವನ ಕಟ್ಟಳೆಯನ್ನು ಕೈಕೊಂಡು ಆತನ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮ ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವದಾದರೆ ನೀನು ಯಾವದನ್ನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವಿ.


ಆದರೂ ಶಾಸ್ತ್ರಕ್ಕೆ ಸರಿಯಾಗಿ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬ ರಾಜಾಜ್ಞೆಯನ್ನು ನೀವು ನೆರವೇರಿಸುತ್ತಿದ್ದರೆ ನೀವು ಒಳ್ಳೇದನ್ನು ಮಾಡುವವರು.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ ಆಶಾಭಂಗಪಡೆನು.


ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು.


ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದು.


ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು ಕಲಿಸಿಕೊಡು; ರಾಜಕುಮಾರನಾದ ಅವನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.


ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು