Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:15 - ಕನ್ನಡ ಸತ್ಯವೇದವು J.V. (BSI)

15 ನೀನು ಇನ್ನೂ ಹೆಚ್ಚು ಕೂಡಿಸುವಿ. ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:15
10 ತಿಳಿವುಗಳ ಹೋಲಿಕೆ  

ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.


ಬೇರೆ ಸಕಲವಿಧವಾದ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ಯೆಹೋವನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತಾಗಿ ನೇವಿುಸಿ


ಏಫೋದೆಂಬ ಮಹಾಯಾಜಕ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸಿ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದವರ ಕೈಯಿಂದ ಅಲಂಕರಿಸಬೇಕು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ ಕಬ್ಬಿಣ ಇವುಗಳನ್ನೂ ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ಹೀಗಿರಲು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಇವುಗಳ ಕೆಲಸಮಾಡುವದರಲ್ಲಿಯೂ ಧೂಮ್ರ ರಕ್ತ ನೀಲವರ್ಣಗಳ ಬಟ್ಟೆಯನ್ನು ನೇಯುವದರಲ್ಲಿಯೂ ಚಿತ್ರ ಕೆತ್ತುವದರಲ್ಲಿಯೂ ಜಾಣನಾದ ಮನುಷ್ಯನನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯು ಗೊತ್ತು ಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇರುವಂಥ ಜಾಣರೊಂದಿಗೆ ಅವನು ಕೆಲಸಮಾಡಲಿ.


ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಲ್ಲಿ ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ನಾನು ಆತನ ಸನ್ನಿಧಿಯಲ್ಲಿ ಧೂಪಹಾಕುವ ಉದ್ದೇಶದಿಂದ ಹೊರತು ಆತನ ವಾಸಕ್ಕಾಗಿ ಆಲಯವನ್ನು ಕಟ್ಟಿಸುವದಕ್ಕೆ ಎಷ್ಟರವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು