1 ಪೂರ್ವಕಾಲ ವೃತ್ತಾಂತ 22:18 - ಕನ್ನಡ ಸತ್ಯವೇದವು J.V. (BSI)18 ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು. ಅಧ್ಯಾಯವನ್ನು ನೋಡಿ |