Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:6 - ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ದಾವೀದನು ತನ್ನ ಮಗ ಸೊಲೊಮೋನನನ್ನು ಕರೆಯಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:6
15 ತಿಳಿವುಗಳ ಹೋಲಿಕೆ  

ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು.


ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಸರ್ವಸ್ವಸಹಿತವಾಗಿ ಸಾಗಕಳುಹಿಸಿದರು.


ದಾವೀದನ ಅವಸಾನಕಾಲವು ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ -


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು