Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:7 - ಕನ್ನಡ ಸತ್ಯವೇದವು J.V. (BSI)

7 ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:7
16 ತಿಳಿವುಗಳ ಹೋಲಿಕೆ  

ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ಮತ್ತು ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವದಕ್ಕೂ ಯೆರೂಸಲೇವಿುನ ದೇವಾಲಯವನ್ನು ನಾಶಮಾಡುವದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ಕೆಡವಿಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಆಲಸ್ಯವಿಲ್ಲದೆ ಕೈಕೊಳ್ಳಬೇಕು ಎಂಬದೇ.


ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ


ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕಾಗಿ ಆದುಕೊಂಡ ಸ್ಥಳವು ನಿಮಗೆ ದೂರವಾದರೆ ಆತನು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು