1 ಪೂರ್ವಕಾಲ ವೃತ್ತಾಂತ 23:13 - ಕನ್ನಡ ಸತ್ಯವೇದವು J.V. (BSI)13 ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿ |