Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:27 - ಕನ್ನಡ ಸತ್ಯವೇದವು J.V. (BSI)

27 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:27
9 ತಿಳಿವುಗಳ ಹೋಲಿಕೆ  

ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬ ಪ್ರಧಾನರು. ಇವರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರು.


ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.


ಮೂವತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಿತ್ತು.


ದಾವೀದನ ಕಡೇ ಮಾತುಗಳು. ಇಷಯನ ಮಗನಾದ ದಾವೀದನ ನುಡಿಗಳು - ಉನ್ನತಸ್ಥಾನಕ್ಕೆ ಏರಿಸಲ್ಪಟ್ಟವನೂ ಯಾಕೋಬನ ದೇವರಿಂದ ಅಭೀಷೇಕಿಸಲ್ಪಟ್ಟವನೂ ಇಸ್ರಾಯೇಲ್ಯರ ವರಕವಿಯೂ ಆಗಿರುವವನು ಹೇಳಿದ್ದು -


ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ ಆರಾಧನಾ ಸಾಮಾಗ್ರಿಗಳನ್ನೂ ಹೊರುವದು ಅವಶ್ಯವಿಲ್ಲವೆಂದುಕೊಂಡು ದಾವೀದನು ಈ ಪ್ರಕಾರ ವಿಧಿಸಿದನು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರವಾಗಿಯೂ ಆಯಾ ಉದ್ಯೋಗವರ್ಗಗಳಿಗನುಸಾರವಾಗಿಯೂ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಯಾಜಕರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು