Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:28 - ಕನ್ನಡ ಸತ್ಯವೇದವು J.V. (BSI)

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:28
28 ತಿಳಿವುಗಳ ಹೋಲಿಕೆ  

ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲಾಜ್ಞಾಪಿಸಿದನು. ಅವು ಸಿದ್ಧವಾದ ಮೇಲೆ


ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.


ಒಳಗಣ ಪ್ರಾಕಾರಕ್ಕೆ ಸೇರಿದ ಇಪ್ಪತ್ತು ಮೊಳ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶವು ಐವತ್ತು ಮೊಳ ಅಗಲ; [ಅಲ್ಲಿನ ಎರಡು ಸಾಲುಗಳ] ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.


ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ


ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.


ಆದದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇವಿುನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಗೋತ್ರಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿಡುವವರೆಗೂ ಕಾಯಿರಿ ಅಂದೆನು.


ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ,


ದಾವೀದನು ಇವರಲ್ಲಿ ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ ಮಂದಿಯನ್ನೂ ನ್ಯಾಯಾಧಿಪತಿಗಳನ್ನಾಗಿ ಮತ್ತು


ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧಸ್ಥಳ, ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.


ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ


ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು.


ಅವರು ಅರಸನ ಆಜ್ಞಾಧಾರಕರಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವದಕ್ಕೆ ಬಂದರು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.


ಆಮೇಲೆ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು; ಒಟ್ಟಾಗಿ ನೆಲಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ದೇವಾಲಯದ ಸಕಲ ಸೇವೆಯಲ್ಲಿಯೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.


ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು