Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:29 - ಕನ್ನಡ ಸತ್ಯವೇದವು J.V. (BSI)

29 ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:29
16 ತಿಳಿವುಗಳ ಹೋಲಿಕೆ  

ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.


ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;


ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ 1365 ರೂಪಾಯಿ ತೆಗೆದುಕೊಂಡನು.


ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಅದನ್ನು ಸಮರ್ಪಿಸುವ ಯಾಜಕನಿಗೆ ಆಗಬೇಕು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ


ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ಮತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು