Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:4 - ಕನ್ನಡ ಸತ್ಯವೇದವು J.V. (BSI)

4 ದಾವೀದನು ಇವರಲ್ಲಿ ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ ಮಂದಿಯನ್ನೂ ನ್ಯಾಯಾಧಿಪತಿಗಳನ್ನಾಗಿ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:4
16 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇವಿುಗೆ ಹಿಂದಿರುಗಿ ಬಂದು ಲೇವಿಯರಿಂದಲೂ ಯಾಜಕರಿಂದಲೂ ಇಸ್ರಾಯೇಲ್‍ಗೋತ್ರ ಪ್ರಧಾನರಿಂದಲೂ ಕೆಲವರನ್ನು ಆರಿಸಿ ಯೆಹೋವ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವದಕ್ಕೋಸ್ಕರ ಯೆರೂಸಲೇವಿುನಲ್ಲಿ ಇರಿಸಿ ಅವರಿಗೆ -


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ದೇವಾಲಯ ಸೇವಾ ಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಯೆರೂಸಲೇವಿುನಲ್ಲಿದ್ದ ಲೇವಿಯರ ನಾಯಕನು.


ಜಿಕ್ರಿಯ ಮಗನಾದ ಯೋವೇಲನು ಇವರ ನಾಯಕನು; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.


ಅವರ ಸಹೋದರರಾದ ಇತರ ಲೇವಿಯರು ದೇವಾಲಯವಾಗಿರುವ ಮಂದಿರದ ಸೇವೆಗಾಗಿ ನೇವಿುಸಲ್ಪಟ್ಟರು.


ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ.


ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು