1 ಪೂರ್ವಕಾಲ ವೃತ್ತಾಂತ 24:1 - ಕನ್ನಡ ಸತ್ಯವೇದವು J.V. (BSI)1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.