Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:2 - ಕನ್ನಡ ಸತ್ಯವೇದವು J.V. (BSI)

2 ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದದರಿಂದ ಎಲ್ಲಾಜಾರ್ ಈತಾಮಾರರು ಯಾಜಕೋದ್ಯೋಗವನ್ನು ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾದಾಬ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:2
11 ತಿಳಿವುಗಳ ಹೋಲಿಕೆ  

ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ನಾದಬ್ ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಸತ್ತು ಹೋದರು.


ನಾದಾಬ್ ಅಬೀಹೂ ಎಂಬಿಬ್ಬರು ಸೀನಾಯಿ ಅರಣ್ಯದಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು; ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಈತಾಮಾರ್ ಎಂಬಿಬ್ಬರು ತಂದೆಯ ಕೈಕೆಳಗೆ ಯಾಜಕಧರ್ಮವನ್ನು ನಡಿಸಿದರು.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ವಿುಕ್ಕಿರುವ ನೈವೇದ್ಯದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು.


ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;


ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.


ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.


ಆರೋನನ ಮಕ್ಕಳು - ಚೊಚ್ಚಲ ಮಗನಾದ ನಾದಾಬ್; ಆಮೇಲೆ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು