1 ಪೂರ್ವಕಾಲ ವೃತ್ತಾಂತ 24:6 - ಕನ್ನಡ ಸತ್ಯವೇದವು J.V. (BSI)6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇವಿುಸಿ ಎಲ್ಲಾ ವರ್ಗಗಳ ಸರತಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೆತನೇಲನ ಮಗನಾದ ಶೆಮಾಯನು ಲೇಖಕನಾಗಿದ್ದನು. ಶೆಮಾಯನು ಲೇವಿ ಸಂತತಿಗೆ ಸೇರಿದವನಾಗಿದ್ದನು. ಇವನು ವಂಶಾವಳಿಯನ್ನು ಬರೆದಿಡುತ್ತಿದ್ದನು. ಅರಸನಾದ ದಾವೀದನ ಮತ್ತು ಯಾಜಕರಾದ ಚಾದೋಕನ, ಅಹೀಮೆಲೆಕನ ಮತ್ತು ಲೇವಿಯರ ನಾಯಕರ ಎದುರಿನಲ್ಲಿ ಸಂತತಿಯವರನ್ನು ಬರೆದನು. ಪ್ರತಿಸಲ ಚೀಟುಹಾಕಿ ಒಬ್ಬನನ್ನು ಒಂದು ಕೆಲಸಕ್ಕೆ ಆರಿಸಿದಾಗ ಅವನ ಹೆಸರನ್ನು ವಂಶಾವಳಿಯಲ್ಲಿ ಬರೆದನು. ಹೀಗೆ ಒಬ್ಬೊಬ್ಬನು ಯಾವಯಾವ ಕೆಲಸಗಳನ್ನು ಮಾಡಬೇಕೆಂದು ಎಲ್ಲರಿಗೂ ಗೊತ್ತುಪಡಿಸಿದರು. ಈ ರೀತಿಯಾಗಿ ಎಲ್ಲಾಜಾರ್ ಮತ್ತು ಈತಾಮಾರ್ ಕುಟುಂಬದವರಿಗೆ ಯಾಜಕೋದ್ಯೋಗವನ್ನು ಮಾಡುವಂತೆ ವರ್ಗಗಳಾಗಿ ಪ್ರತ್ಯೇಕಿಸಿ ಕೆಲಸಗಳನ್ನು ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೆಯೇಲ್ ಇವನ ಮಗ ಲೇಖಕನಾದ ಶೆಮಾಯನು ಅರಸನ ಮುಂದೆಯೂ; ಪ್ರಧಾನರು, ಯಾಜಕನಾದ ಚಾದೋಕನು, ಅಬಿಯಾತರನ ಮಗ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಅವರ ಹೆಸರುಗಳನ್ನು ಬರೆದನು. ಎಲಿಯಾಜರನಿಗೋಸ್ಕರ ಒಂದು ಶ್ರೇಷ್ಠ ಮನೆ ತೆಗೆದುಕೊಳ್ಳಲಾಯಿತು. ಅದರಂತೆಯೇ, ಈತಾಮಾರನಿಗೋಸ್ಕರವೂ ಒಂದು ತೆಗೆದುಕೊಳ್ಳಲಾಯಿತು. ಅಧ್ಯಾಯವನ್ನು ನೋಡಿ |