1 ಪೂರ್ವಕಾಲ ವೃತ್ತಾಂತ 25:1 - ಕನ್ನಡ ಸತ್ಯವೇದವು J.V. (BSI)1 ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.