17 ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,
17 ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.
ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.