Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:29 - ಕನ್ನಡ ಸತ್ಯವೇದವು J.V. (BSI)

29 ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಶಾರೋನಿನಲ್ಲಿ ಮೇಯುವ ದನಗಳ ಮೇಲೆ‍ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಶಾರೋನಿನ ಶಿಟ್ರೈಯು ಶಾರೋನಿನ ಸುತ್ತಮುತ್ತಲಿದ್ದ ರಾಜನ ಕುರಿದನಗಳ ಹಿಂಡುಗಳ ಅಧಿಕಾರಿಯಾಗಿದ್ದನು. ಅದ್ಲ್ಯೆಯ ಮಗನಾದ ಶಾಫಾಟನು ತಗ್ಗುಪ್ರದೇಶಗಳಲ್ಲಿದ್ದ ರಾಜನ ಪಶುಗಳ ಹಿಂಡುಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:29
9 ತಿಳಿವುಗಳ ಹೋಲಿಕೆ  

ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ ಅದರ ಗ್ರಾಮಗಳಲ್ಲಿಯೂ ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.


ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.


ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.


ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು