Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:11 - ಕನ್ನಡ ಸತ್ಯವೇದವು J.V. (BSI)

11 ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕೊಟ್ಟಾರಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು ಕೃಪಾಸನಮಂದಿರ ಇವುಗಳ ನಕ್ಷೆಯನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಬಳಿಕ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ನಕ್ಷೆಯನ್ನು ಕೊಟ್ಟನು. ದೇವಾಲಯ ಮತ್ತು ಅದರ ಮಂಟಪ, ಉಗ್ರಾಣದ ಕೋಣೆಗಳು, ಮೇಲುಪ್ಪರಿಗೆ, ಒಳಗಿನ ಕೋಣೆಗಳು ಮತ್ತು ಕೃಪಾಸನದ ಮಂದಿರದ ನಕ್ಷೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:11
28 ತಿಳಿವುಗಳ ಹೋಲಿಕೆ  

ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ.


ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು, ನೋಡು.


ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.


ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಕಂಡನು.


ಪ್ರವೇಶ ಸ್ಥಾನದ ಹೊರಗಡೆಯಿಂದ ಒಳಕೈಸಾಲೆಯ ಕೊನೆಯ ತನಕ ಹೆಬ್ಬಾಗಿಲು ಐವತ್ತು ಮೊಳ ಉದ್ದವಾಗಿತ್ತು.


ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.


ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸಂಬಂಧಿಸಲ್ಪಟ್ಟಿದ್ದವು.


ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.


ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿಯೂ


ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು