Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗಿಸಬೇಕಾದ ಎಲ್ಲ ಸಾಮಾನುಗಳ ಬೆಳ್ಳಿ, ಬಂಗಾರದ ತೂಕ ಅಂದರೆ, ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಂಗಾರದ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ, ಬೆಳ್ಳಿಯ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ ನಕ್ಷೆಗಳಿದ್ದವು. ಪ್ರತಿಯೊಂದು ದೀಪ ಮತ್ತು ದೀಪಸ್ತಂಭಗಳಿಗೆ ಬೇಕಾಗುವ ಬೆಳ್ಳಿಬಂಗಾರಗಳನ್ನು ಸಹ ದಾವೀದನು ಸೊಲೊಮೋನನಿಗೆ ತಿಳಿಸಿದನು. ಅವಶ್ಯಕತೆಗೆ ತಕ್ಕಂತೆ ಈ ದೀಪಸ್ತಂಭಗಳನ್ನು ಉಪಯೋಗಿಸಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೇಗೆಂದರೆ, ಬಂಗಾರದ ದೀಪಸ್ತಂಭಗಳಿಗೋಸ್ಕರವೂ, ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕವಾಗಿ ತೂಗಿಕೊಟ್ಟನು. ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪಸ್ತಂಭಕ್ಕೂ, ಅದರ ದೀಪಗಳಿಗೂ ಒಂದೊಂದು ದೀಪಸ್ತಂಭದ ಕೆಲಸದ ಪ್ರಕಾರ ಅಳತೆಮಾಡಿ ತೂಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:15
10 ತಿಳಿವುಗಳ ಹೋಲಿಕೆ  

ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ಮತ್ತು ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.


ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.


ಆರಾಧನೆಯ ಎಲ್ಲಾ ಸಾಮಗ್ರಿಗಳು ಇವುಗಳ ವಿಷಯವಾಗಿಯೂ ತಾನು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರಿಸಿದನು.


ಮೀಸಲ ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು