Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:18 - ಕನ್ನಡ ಸತ್ಯವೇದವು J.V. (BSI)

18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬದನ್ನು ವಿವರಿಸಿ ಹರಡಿದ ರೆಕ್ಕೆಗಳಿಂದ ಯೆಹೋವನ ನಿಬಂಧನಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಧೂಪವೇದಿಗೆ ಎಷ್ಟು ಅಪ್ಪಟ ಬಂಗಾರ ಬೇಕೆಂಬುದನ್ನು ದಾವೀದನು ತಿಳಿಸಿದನು. ಇದಲ್ಲದೆ ದೇವರ ಕೃಪಾಸನವನ್ನು ಮತ್ತು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ರೆಕ್ಕೆಗಳನ್ನು ಚಾಚಿಕೊಂಡಿರುವ ಕೆರೂಬಿದೂತರನ್ನು ತಯಾರಿಸಲು ನಕ್ಷೆಗಳನ್ನು ದಾವೀದನು ಸೊಲೊಮೋನನಿಗೆ ಕೊಟ್ಟನು. ಕೆರೂಬಿದೂತರನ್ನು ಚಿನ್ನದಿಂದ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:18
13 ತಿಳಿವುಗಳ ಹೋಲಿಕೆ  

ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಚೊಕ್ಕ ಬಂಗಾರದ ಮುಳ್ಳು ಬೋಗುಣಿ ಹೂಜೆಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು